Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:10 - ಕನ್ನಡ ಸತ್ಯವೇದವು C.L. Bible (BSI)

10 ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿಪಡೆದಂತೆ ದೇವರ ವಿಶ್ರಾಂತಿಯನ್ನು ಪಡೆದವನು ಸಹ ತನ್ನ ಕೆಲಸಕಾರ್ಯಗಳನ್ನು ಮುಗಿಸಿ ವಿಶ್ರಾಂತಿಯನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರವಿುಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರವಿುಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ತನ್ನ ಕಾರ್ಯವನ್ನು ಮುಗಿಸಿದ ನಂತರ ವಿಶ್ರಾಂತಿ ಹೊಂದಿದನು. ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸುವವನು ಆತನು ಮಾಡಿದಂತೆ ತನ್ನ ಕಾರ್ಯವನ್ನು ಮುಗಿಸಿದವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಶೆಚ್ ದೆವಾಚ್ಯಾ ಆರಾಮ್ಕಿತ್ ಭುತ್ತುರ್ ಗುಸಲ್ಲೊ ಹರ್ ಎಕ್ಲೊ ದೆವಾಚ್ಯಾ ಸಾರ್ಕೆಚ್ ಅಪ್ನಾಚ್ಯಾ ಸಗ್ಳ್ಯಾ ಕಾಮಾತ್ನಾ ಆರಾಮ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:10
9 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.


ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು