Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:12 - ಕನ್ನಡ ಸತ್ಯವೇದವು C.L. Bible (BSI)

12 ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಗೊಸ್ಟ್ ಝಿತ್ತಿ ಅನಿ ಕಾಮ್ ಕರಿತ್ ರಾತಲೆ ಮನ್ತಲೆ ಖರೆಚ್! ತೆ ಪಾಜ್ವಲ್ಲ್ಯಾ ದೊನ್ ಧಾರೆಚ್ಯಾ ಮೊಟ್ಯಾ ಚಾಕ್ವಾನ್ಬಿ ಧಾರ್ ಹೊವ್ನ್ ಹಾಯ್, ಅನಿ ಜಾಸ್ತಿ ಕಾತ್ರುಕ್ ಸಕ್ತಾ ತಸ್ಲಿ, ಜಿವ್ ಅನಿ ಆತ್ಮೊ, ಸಂದ್ ಅನಿ ಹಡ್ಡಾಂಚಿ-ಹಡ್ಡಾ ಸಯ್ತ್ ಭೆಕ್ಳೆ ಹೊಯ್ ಸಾರ್ಕೆ ತೊಡ್ತಲಿ ತಾಕತ್ ತೆಕಾ ಹಾಯ್; ಮಾನ್ಸಾಚ್ಯಾ ಮನಾತ್ಲಿ ಆಶ್ಯಾ ಅನಿ ಯವ್ಜನ್ಯಾ ಸೈತ್ ತೆ ಪಾರಕ್ ಕರುನ್ ಬಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:12
42 ತಿಳಿವುಗಳ ಹೋಲಿಕೆ  

ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ II


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಬೆಳಕು ಬೆಳಗಿಸುವ ವಸ್ತುಗಳೆಲ್ಲವೂ ಕಂಗೊಳಿಸುವುವು. ಹೀಗೆ ಕಂಗೊಳಿಸುವುದೆಲ್ಲವೂ ಬೆಳಕಾಗುವುದು.


“ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II


ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.


ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ.


ದೇವರ ವಾಕ್ಯವನ್ನು ನಿಮಗೆ ಹೇಳಿಕೊಟ್ಟ ಹಿಂದಿನ ಸಭಾನಾಯಕರನ್ನು ಮರೆಯಬೇಡಿ. ಅವರು ಹೇಗೆ ಬಾಳಿದರು, ಎಂಥ ಮರಣವನ್ನು ಪಡೆದರು ಎಂಬುದನ್ನು ಕುರಿತು ಆಲೋಚಿಸಿರಿ. ಅವರ ವಿಶ್ವಾಸ ನಿಮಗೆ ಆದರ್ಶವಾಗಿರಲಿ.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಕಡೆಗೆ ಅವಳು ಕಹಿ ಮಾಚಿಪತ್ರೆಯಂತೆ, ಹರಿತವಾದ ಇಬ್ಬಾಯಿ ಕತ್ತಿಯಂತೆ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಜ್ಞಾನಿಗಳ ನುಡಿಗಳು ಮೊನೆಗೋಲುಗಳು, ಅವರು ಸಂಗ್ರಹಿಸಿದ ವಚನಗಳು ಬಿಗಿಯಾಗಿ ಜಡಿದ ಮೊಳೆಗಳು. ಅವುಗಳ ಮೂಲಕರ್ತನು ಎಲ್ಲರ ಏಕೈಕ ಮೇಷಪಾಲ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಇಸ್ರಯೇಲರು ಮರಳುಗಾಡಿನಲ್ಲಿ ಸಭೆಸೇರಿದ್ದಾಗ, ಅವರ ಮಧ್ಯೆ ಇದ್ದು, ಸೀನಾಯಿ ಬೆಟ್ಟದಲ್ಲಿ ಮಾತನಾಡಿದ ದೇವದೂತನೊಡನೆಯೂ ನಮ್ಮ ಪಿತೃಗಳೊಡನೆಯೂ ಸಂಭಾಷಿಸಿದವನು ಇವನೇ. ನಮಗೀಯಲು ಜೀವೋಕ್ತಿಗಳನ್ನು ದೇವರಿಂದ ಪಡೆದವನು ಇವನೇ.


ದೇವರ ವಾಕ್ಯದ ಸವಿಯುಂಡು, ಬರಲಿರುವ ಯುಗದ ವೈಭವವನ್ನು ಮನಗಂಡು,


ಅವನು ತನಗಾಗಿ ಒಂದುವರೆ ಅಡಿ ಉದ್ದವಾದ ಇಬ್ಬಾಯಿ ಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ, ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು