Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:13 - ಕನ್ನಡ ಸತ್ಯವೇದವು C.L. Bible (BSI)

13 ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ರಚುನ್ ಹೊಲ್ಲ್ಯಾ ಸಗ್ಳ್ಯಾತ್ ದೆವಾಚ್ಯಾ ದಿಸ್ಟಿತ್ನಾ ನಿಪುನ್ ಅಸಲ್ಲೆ ಕಾಯ್ಬಿ ನಾ. ಸಗ್ಳೆ ತೆಚ್ಯಾ ಇದ್ರಾಕ್ ಉಗಡಲ್ಲೆ, ಅನಿ ದೊಳ್ಯಾಂಚ್ಯಾ ಇದ್ರಾಕ್ ಸೊಡ್ವುನ್ ಚಿತ್ತಾರ್ ಕಾಡುನ್ ಥವಲ್ಲ್ಯಾ ಸಾರ್ಕೆ ಹಾಯ್, ಅಮಿ ಕರಲ್ಲ್ಯಾ ಕಾಮಾಂಚೊ ಲೆಕ್ಕ್ ಅಮಿ ತ್ಯಾಚ್ ದೆವಾಕ್ ದಿತಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:13
37 ತಿಳಿವುಗಳ ಹೋಲಿಕೆ  

ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಆದರೆ ಯೇಸು ಎಲ್ಲರನ್ನು ಚೆನ್ನಾಗಿ ಬಲ್ಲವರಾದ್ದರಿಂದ ಅವರ ಈ ನಂಬಿಕೆಗೆ ಮಾರುಹೋಗಲಿಲ್ಲ.


ಮರಣದ ದ್ವಾರಗಳು ನಿನಗೆ ಗೋಚರವಾಗಿರುವುವೋ? ಘೋರಾಂಧಕಾರದ ಕದಗಳನ್ನು ನೀನು ಕಂಡಿರುವೆಯೋ?


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಪ್ರಭು, ನಾ ಮಾತೆತ್ತುವುದಕ್ಕೆ ಮುಂಚಿತವಾಗಿ I ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ II


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ಅದಕ್ಕೆ ಯೇಸು, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು