Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:15 - ಕನ್ನಡ ಸತ್ಯವೇದವು C.L. Bible (BSI)

15 ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ತೊ ಅಮ್ಚ್ಯಾ ಬಳ್ ನಸಲ್ಲ್ಯಾಚ್ಯಾ ವಿಶಯಾತ್ ದಯಾ ಮಯಾ ಹೊತ್ತೊ ತಸ್ಲೊ ಶ್ರೆಸ್ಟ್ ಯಾಜಕ್ ಅಮ್ಚ್ಯಾ ಸಾರ್ಕೆಚ್ ಸಗ್ಳ್ಯಾತ್‍ಬಿ ಪರಿಕ್ಷಾ ಸೊಸಲ್ಲೊಚ್ ತೊ, ಹೊಲ್ಯಾರ್ ಬಿ ತೆನಿ ಪಾಪ್ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:15
20 ತಿಳಿವುಗಳ ಹೋಲಿಕೆ  

ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.


ನನ್ನಲ್ಲಿ ತಪ್ಪಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಆಡುವುದಾದರೆ ನನ್ನನ್ನು ನೀವು ನಂಬುವುದಿಲ್ಲವೇಕೆ?


ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.


“ನನ್ನ ಶೋಧನೆ-ವೇದನೆಗಳಲ್ಲಿ ನನ್ನನ್ನು ಬಿಟ್ಟಗಲದೆ ಇದ್ದವರು ನೀವು.


ನಾಲ್ವತ್ತು ದಿನ ಅಲ್ಲಿದ್ದಾಗ ಅವರನ್ನು ಪರೀಕ್ಷಿಸಲು ಪಿಶಾಚಿ ಪ್ರಯತ್ನಿಸಿತು. ಅಷ್ಟು ದಿನಗಳೂ ಏನನ್ನೂ ತಿನ್ನದೆ ಉಪವಾಸವಿದ್ದ ಯೇಸುವಿಗೆ ಆಗ ಹಸಿವಾಯಿತು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


“ಪರದೇಶೀಯರನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದಿರಲ್ಲವೆ? ಅಂಥವರ ಮನೋವ್ಯಥೆ ನಿಮಗೆ ಗೊತ್ತೇ ಇದೆ.


ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.


ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು