ಇಬ್ರಿಯರಿಗೆ 4:2 - ಕನ್ನಡ ಸತ್ಯವೇದವು C.L. Bible (BSI)2 ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತ್ಯಾ ಅದ್ಲ್ಯಾ ಲೊಕಾನಿ ಆಯ್ಕಲ್ಲಿ ತಿಚ್ ಬರಿ ಖಬರ್ ಅಮಿಬಿ ಆಯಿಕ್ಲಾವ್, ಖರೆ ತ್ಯಾ ಲೊಕಾನಿ ಆಯ್ಕಲ್ಲಿ ತಿ ಗೊಸ್ಟ್ ವೈನಾ ತೆಂಚ್ಯಾಕ್ನಾ ಕಾಯ್ಬಿ ಫಾಯ್ದೊ ಯೆವ್ಕ್ ನಾ. ಕಶ್ಯಾಕ್ ತೆ ಆಯ್ಕಲ್ಲ್ಯಾನಿ ವಿಶ್ವಾಸಾನ್ ತ್ಯಾ ಗೊಸ್ಟಿಯಾ ಅಪ್ನಾಚ್ಯಾ ಭುತ್ತುರ್ ಜಿರ್‍ವುನ್ ಘೆವ್ಕ್ ನಾತ್. ಅಧ್ಯಾಯವನ್ನು ನೋಡಿ |