Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:11 - ಕನ್ನಡ ಸತ್ಯವೇದವು C.L. Bible (BSI)

11 ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ವಿಷಯದಲ್ಲಿ ನಾವು ಹೇಳಬೇಕಾದ ಮಾತು ಬಹಳ ಉಂಟು, ಆದರೆ ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ‍ಹ್ಯಾ ವಿಶಯಾತ್ ಅಮಿ ಸಾಂಗುಕ್ ಗೆಲ್ಯಾರ್ ಲೈ ಹಾಯ್ ಖರೆ ತುಮ್ಚಿ ಕಾನಾ ದಾಟ್ ಹೊಲ್ಯಾತ್, ತಸೆಮನುನ್ ತುಮ್ಕಾ ಸೊಡ್ಸುನ್ ಸಾಂಗುಕ್ ಮಾಕಾ ಕಸ್ಟ್ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:11
12 ತಿಳಿವುಗಳ ಹೋಲಿಕೆ  

ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.


ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’


ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು.


ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು.


ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!


ಆಗ ಯೇಸು, “ಇಷ್ಟಾದರೂ, ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.


ಅಲ್ಲದೆ, ದೇವರಿಂದ, “ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕ,” ಎನಿಸಿಕೊಂಡರು.


ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು