Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:14 - ಕನ್ನಡ ಸತ್ಯವೇದವು C.L. Bible (BSI)

14 ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ ಅಂದರೆ ಜ್ಞಾನೇಂದ್ರಿಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಇದು ಒಳ್ಳೇದು ಅದು ಕೆಟ್ಟದ್ದು ಎಂಬ ಭೇದವನ್ನು ತಿಳಿದವರಿಗೋಸ್ಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಘಟ್ಲೆ ಜೆವಾನ್ ಮೊಟೆ ಹೊಲ್ಲ್ಯಾಕ್ನಿ; ಪಾಜೆ ಹೊಲ್ಲೊ ತವ್ಡೊ ಅನ್‍ಬೊಗ್ ಕರುನ್ ಖಲೆ ಬರೆ ಖಲೆ ವಾಯ್ಟ್ ಮನ್ತಲಿ ಸಮಜ್ ಹೊತ್ತ್ಯಾಕ್ನಿ ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:14
24 ತಿಳಿವುಗಳ ಹೋಲಿಕೆ  

ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.


ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.


ನಮ್ಮಲ್ಲಿ ಪರಿಣತರಾದವರು ಈ ವಿಷಯದಲ್ಲಿ ಇದೇ ಮನೋಭಾವನೆಯಿಂದ ಇರಬೇಕು. ಯಾವುದಾದರೂ ಒಂದು ವಿಷಯದಲ್ಲಿ ನೀವು ಭಿನ್ನಾಭಿಪ್ರಾಯ ಉಳ್ಳವರಾಗಿದ್ದರೆ ದೇವರು ನಿಜಾಂಶವನ್ನು ಸ್ಪಷ್ಟೀಕರಿಸುವರು.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ವಿಶ್ವಾಸದಲ್ಲಿ ಸ್ಥಿರವಿಲ್ಲದವರನ್ನೂ ನಿಮ್ಮ ಸಂಗಡ ಸೇರಿಸಿಕೊಳ್ಳಿರಿ. ಆದರೆ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ವಾಗ್ವಾದ ನಡೆಸಬೇಡಿ.


ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.


ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ನಾಲಿಗೆ ರುಚಿನೋಡುವಂತೆಯೆ ಕಿವಿ ನುಡಿಯನು ವಿವೇಚಿಸುತ್ತದೆ.


ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ.


ನಾಲಿಗೆ ಆಹಾರವನು ರುಚಿನೋಡುವಂತೆ ಕಿವಿ ನುಡಿಮಾತುಗಳನು ವಿವೇಚಿಸುತ್ತದೆ.


ರುಚಿ ವಿಷಯದಲ್ಲಿ ನಾಲಿಗೆ ತಪ್ಪುಮಾಡುತ್ತದೆಯೇ? ಸತ್ಯಾಸತ್ಯಗಳ ವಿವೇಚನೆ ನನಗಿಲ್ಲವೇ?’


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.


ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.


ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು