Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:4 - ಕನ್ನಡ ಸತ್ಯವೇದವು C.L. Bible (BSI)

4 ಅಲ್ಲದೆ, ಪ್ರಧಾನಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆ ಹೊಂದಿದವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ದೇವರಿಂದ ನೇವಿುಸಲ್ಪಟ್ಟು ವಹಿಸಿಕೊಳ್ಳುತ್ತಾನೆ; ಆರೋನನು ಸಹ ದೇವರಿಂದಲೇ ನೇವಿುಸಲ್ಪಟ್ಟು ಆ ಗೌರವವನ್ನು ವಹಿಸಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಆರೊನಾಚ್ಯಾ ಸಾರ್ಕೆ ದೆವಾನ್ ಬಲ್ವಲ್ಲ್ಯಾ ಶಿವಾಯ್ ಖಲ್ಯಾಬಿ ಮಾನ್ಸಾನ್ ಹೆ ಮೊಟ್ಯಾ ಯಾಜಕಾಚೆ ಕಾಮ್ ಮೊಟೆಪಾನ್ ಅಪ್ನಿಚ್ ಹಾತಿತ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:4
16 ತಿಳಿವುಗಳ ಹೋಲಿಕೆ  

:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


“ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.


ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.”


ಇದು ಕೋರಹನಾದ ನಿನಗೂ ನಿನ್ನ ಸ್ವಕುಲದವರಾದ ಲೇವಿಯರಿಗೂ ಕೇವಲ ಅಲ್ಪಕಾರ್ಯವೆಂದು ತೋರಿತೇ? ಯಾಜಕ ಪದವಿ ನಿಮಗಾಗಬೇಕೆಂದು ಕೋರುತ್ತೀರೋ?


ಆಗ ಸರ್ವೇಶ್ವರ ಯಾರನ್ನು ಮೆಚ್ಚುತ್ತಾರೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ಅಧಿಕವಾಗಿರುವುದು ನಿಮ್ಮ ವರ್ತನೆಯೆ!”


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಅಭಿಷೇಕದಿಂದ ಪ್ರತಿಷ್ಠಿತರಾದವರು ಇವರೇ.


ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು