Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:5 - ಕನ್ನಡ ಸತ್ಯವೇದವು C.L. Bible (BSI)

5 ಅದೇ ರೀತಿ ಕ್ರಿಸ್ತಯೇಸು, ಪ್ರಧಾನಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. “ನೀನೇ ನನ್ನ ಪುತ್ರನು; ನಾನೇ ನಿನ್ನನ್ನು ಪಡೆದಿದ್ದೇನೆ,” ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಾಗೆಯೇ ಕ್ರಿಸ್ತನು ಸಹ ತನ್ನನ್ನು ಘನಪಡಿಸಿಕೊಂಡು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ; ಆದರೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತನೂ ಇದೇ ರೀತಿ ನೇಮಿಸಲ್ಪಟ್ಟನು. ಆತನು ಪ್ರಭಾವದ ಪ್ರಧಾನಯಾಜಕನಾಗಿ ತನ್ನನ್ನು ತಾನೇ ಆರಿಸಿಕೊಳ್ಳಲಿಲ್ಲ. ಆದರೆ ದೇವರು ಆತನನ್ನು ಆರಿಸಿದನು. ದೇವರು ಕ್ರಿಸ್ತನಿಗೆ ಹೀಗೆ ಹೇಳಿದನು: “ನೀನು ನನ್ನ ಮಗನು. ಈ ದಿನ ನಾನು ನಿನ್ನ ತಂದೆಯಾದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಚ್ಯಾ ಸಾರ್ಕೆಚ್ ಕ್ರಿಸ್ತಾನ್‍ಬಿ ಶ್ರೆಸ್ಟ್ ಯಾಜಕಾಚೆ ಮೊಟೆಪಾನ್ ಅಪ್ನಿಚ್ ಹೊವ್ನ್ ಘೆವ್ಕ್ ನಾ, ತೆಕಾ ಯಾಜಕ್ ಕರುನ್ ನೆಮಲ್ಲ್ಯಾ ತ್ಯಾ ದೆವಾನ್ ತೆಕಾ, ತಿಯಾ ಮಾಜೊ ಲೆಕ್, ಆಜ್ಚ್ಯಾ ದಿಸಿ ಮಿಯಾ ತುಕಾ ಬಾಬಾ ಹೊಲಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:5
12 ತಿಳಿವುಗಳ ಹೋಲಿಕೆ  

ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.


ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಅಲ್ಲದೆ, ದೇವರಿಂದ, “ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕ,” ಎನಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು