ಇಬ್ರಿಯರಿಗೆ 5:7 - ಕನ್ನಡ ಸತ್ಯವೇದವು C.L. Bible (BSI)7 ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಜೆಜು ಹ್ಯಾ ಜಗಾತ್ ಹೊತ್ತೊ ತನ್ನಾ ಅಪ್ನಾಕ್ ಮರ್‍ನಾತ್ನಾ ಹುರ್‍ವುಕ್ ಬಳ್ ಹೊತ್ತ್ಯಾಕಡೆ ಬೊಬ್ ಮಾರುನ್ ಅನಿ ಡೊಳ್ಯಾನಿತ್ನಾ ದುಕ್ಕಾ ಗಳ್ವುನ್ ಮಾಗ್ನಿಯಾ ಅನಿ ವಿನಂತ್ಯಾ ಕರುಕ್‍ಲಾಲೊ, ತೆಚ್ಯಾ ಮಾನಾಚ್ಯಾ ಖಾಲ್ತಿಪಾನಾ ಸಾಟ್ನಿ ದೆವಾನ್ ತೆಚಿ ಮಾಗ್ನಿ ಆಯಿಕ್ಲ್ಯಾನ್. ಅಧ್ಯಾಯವನ್ನು ನೋಡಿ |