Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:8 - ಕನ್ನಡ ಸತ್ಯವೇದವು C.L. Bible (BSI)

8 ಯೇಸು, ದೇವರ ಪುತ್ರರಾಗಿದ್ದರೂ ಹಿಂಸೆಬಾಧೆಗಳನ್ನು ತಪ್ಪಿಸಿಕೊಳ್ಳದೆ ವಿಧೇಯತೆಯನ್ನು ಅನುಭವದಿಂದ ಅರಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ದೇವರ ಮಗನಾಗಿದ್ದಾನೆ. ಆದರೂ ಹಿಂಸೆಗೊಳಗಾಗಿ, ತಾನು ಅನುಭವಿಸಿದ ಹಿಂಸೆಗಳಿಂದಲೇ ವಿಧೇಯನಾಗಿರುವುದನ್ನು ಕಲಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ತೊ ದೆವಾಚೊ ಲೆಕ್ ಹೊಲ್ಯಾರ್ ಬಿ ಅಪ್ನಿ ಸೊಸಲ್ಲ್ಯಾ ಕಸ್ಟಾ ವೈನಾ ಖಾಲ್ತಿ ಪಾನ್ ಮನ್ತಲೆ ತೆನಿ ಶಿಕ್ಲ್ಯಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:8
13 ತಿಳಿವುಗಳ ಹೋಲಿಕೆ  

ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು