Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:9 - ಕನ್ನಡ ಸತ್ಯವೇದವು C.L. Bible (BSI)

9 ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ಸಂಪುರ್ನ್ ತೆಚ್ಯಾ ಟೊಕೆಕ್ ತೆಚಿ ಗೊಸ್ಟ್ ಪಾಳ್ತಲ್ಯಾ ಸಗ್ಳ್ಯಾಕ್ನಿ ಸದಾ ಸರ್ವತಾಚ್ಯಾ ಸುಟ್ಕೆಚೊ ಕಾರನ್ ತೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:9
39 ತಿಳಿವುಗಳ ಹೋಲಿಕೆ  

ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಅದಕ್ಕೆ ಯೇಸು, “ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯಸಿದ್ಧಿಗೆ ಬರುವುದು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಹರ್ಷಾನಂದವನು ಮೊಳಗಿಸೆನ್ನೊಳು I ಪುಳಕಗೊಳ್ಳುವುವು ನೀ ಮುರಿದೆಲುಬುಗಳು II


ನಿನ್ನ ನಾಮಸ್ಮರಣೆಯನುಳಿಸುವೆನು ಚಿರಕಾಲ I ಹೊಗಳುವರು ಸಕಲ ಜನರು ನಿನ್ನನು ಅನುಗಾಲ II


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು