Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:17 - ಕನ್ನಡ ಸತ್ಯವೇದವು C.L. Bible (BSI)

17 ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆಚ್ ದೆವಾನ್ ಅಪ್ಲೊ ಉದ್ದೆಸ್ ಘಟ್ ಹಾಯ್ ಮನ್ತಲೆ ತೆಬಿ ಭೊಮಾನಾ ಘೆಟಲ್ಯಾಕ್ನಿ ದಾಕ್ವುಚೆ ಮನುನ್ ಅಪ್ಲಿ ಗೊಸ್ಟ್ ಥವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:17
31 ತಿಳಿವುಗಳ ಹೋಲಿಕೆ  

ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.


“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II


ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ.


ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.


“ಯಕೋಬನ ಕುಲಪುತ್ರರೇ, ನಾನು ಅದಲುಬದಲಾಗದ ಸರ್ವೇಶ್ವರ, ಈ ಕಾರಣದಿಂದ ನೀವು ಅಳಿಯದೆ ಉಳಿದಿದ್ದೀರಿ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಆ ವ್ಯಕ್ತಿ ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲವೆಂಬುದನ್ನು ದೃಢಪಡಿಸಲು ಸರ್ವೇಶ್ವರನ ಮೇಲೆ ಪ್ರಮಾಣ ಮಾಡಬೇಕು. ಪ್ರಾಣಿಯ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು. ಪ್ರಮಾಣ ಮಾಡುವವನು ಈಡು ಕೊಡಬೇಕಾದ ಅಗತ್ಯವಿರುವುದಿಲ್ಲ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು