Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:18 - ಕನ್ನಡ ಸತ್ಯವೇದವು C.L. Bible (BSI)

18 ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾಕ್ನಾ ಆದಾರ್ ಘೆವ್ಚೆ ಮನುನ್ ಪಳುನ್ ಯೆವ್ನ್, ಅಮ್ಚ್ಯಾ ಫಿಡೆ ಥವಲ್ಲೊ ಬರೊಸೊ ದರುನ್ ಘೆಟಲ್ಲ್ಯಾ ಅಮ್ಕಾ ಆಧಾರ್ ಹೊತ್ತ್ಯಾ ಸಾಟ್ನಿ ಘಟ್ಟ್ ಮುಟ್ಟ್ ಧೈರ್ಯ್ ಹೊಲಾ, ದೆವ್ ಝುಟೆ ಬೊಲಿನಾ ತಸೆಹೊವ್ನ್ ಆಧಾರ್ ಘೆವ್ಚೆ ಮನುನ್ ಅಮ್ಚ್ಯಾ ಫಿಡೆ ಥವಲ್ಲೊ ಬರೊಸೊ ಧರುನ್ ಘೆಟಲ್ಲೆ ಹೊವ್ನ್ ಅಮ್ಕಾ ಮೊಟಿ ಉಮ್ಮೆದ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:18
46 ತಿಳಿವುಗಳ ಹೋಲಿಕೆ  

ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.


ನಿಮ್ಮಲ್ಲಿ ಯಾರಾದರು ಅರಿಯದೆ ಅಕಸ್ಮಾತ್ತಾಗಿ ನರಹತ್ಯೆ ಮಾಡಿದ್ದೇ ಆದರೆ ಅಂಥವನು ಅಲ್ಲಿಗೆ ಓಡಿಹೋಗಲಿ. ಹತನಾದವನ ಹತ್ತಿರದ ಬಂಧು ಮುಯ್ಯಿತೀರಿಸದಂತೆ ಆ ನಗರಗಳು ನಿಮಗೆ ಆಶ್ರಯ ಸ್ಥಾನವಾಗಿರಲಿ.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು.”


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು : “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II


ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)


ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.


ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.


ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.


ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.


ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು