Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:2 - ಕನ್ನಡ ಸತ್ಯವೇದವು C.L. Bible (BSI)

2 ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸ್ನಾನ, ಹಸ್ತಾರ್ಪಣಗಳ ವಿಷಯವಾದ ಉಪದೇಶ, ಸತ್ತವರಿಗೆ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಉಂಟೆಂಬದು ಇವುಗಳನ್ನು ಪದೇಪದೇ ಅಸ್ತಿವಾರವಾಗಿ ಹಾಕದೆ ಕ್ರಿಸ್ತನ ವಿಷಯವಾದ ಪ್ರಥಮ ಬೋಧನೆಯನ್ನು ಕುರಿತು ಇನ್ನೂ ಮಾತಾಡದೆ ಪೂರ್ಣವಾದ ತಿಳುವಳಿಕೆಗೆ ಸಾಗುತ್ತಾ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯಾ ವೆಳಾರ್ ಬಾಲ್ತಿಮಾಚ್ಯಾ ವಿಶಯಾತ್, ಹಾತ್ ಥವ್ತಲ್ಯಾ ವಿಶಯಾತ್, ಅನಿ ಮರಲ್ಲೊ ಅನಿಪರ್‍ತುನ್ ಝಿತ್ತೊ ಹೊತಲೆ, ಕನ್ನಾಬಿ ಚುಕಿನಸಲ್ಲಿ ಝಡ್ತಿ ಹ್ಯಾ ಶಿಕಾಪಾಚ್ಯಾ ವಿಶಯಾತ್ನಿ, ಪರ್ತುನ್ ಪಾಯ್ ಘಾಲುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:2
57 ತಿಳಿವುಗಳ ಹೋಲಿಕೆ  

ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು.


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


“ನಮ್ಮಂತೆಯೇ ಪವಿತ್ರಾತ್ಮ ಅವರನ್ನು ಪಡೆದಿರುವ ಈ ಜನರಿಗೆ ದೀಕ್ಷಾಸ್ನಾನ ಕೊಡಲು ಅಭ್ಯಂತರವಿದೆಯೇ?’ ಎಂದನು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದುಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು.


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.


ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.


ಹೀಗೆ ಅವರು ಮೋಡದಲ್ಲಿಯೂ ಸಮುದ್ರದಲ್ಲಿಯೂ ಸ್ನಾನದೀಕ್ಷೆಯನ್ನು ಪಡೆದು ಮೋಶೆಗೆ ಶಿಷ್ಯರಾದರು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ?


‘ಸತ್ತವರು ಪುನರುತ್ಥಾನ ಹೊಂದುತ್ತಾರೆ, ಎಂಬ ವಿಷಯಕ್ಕಾಗಿ ನಾನು ಇಂದು ನಿಮ್ಮ ಮುಂದೆ ವಿಚಾರಣೆಗೆ ಗುರಿಯಾಗಿದ್ದೇನೆ’ ಎಂದು ನಾನು ಆ ಸಭೆಯ ಮುಂದೆ ಕೂಗಿ ಹೇಳಿದ್ದನ್ನು ಬಿಟ್ಟರೆ, ಬೇರೆ ಏನನ್ನು ನನ್ನಲ್ಲಿ ಕಂಡರೆಂದು ಇವರೇ ಹೇಳಲಿ,” ಎಂದನು.


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೊಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು.


ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.


ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.


ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.


ಊಟಕ್ಕೆ ಮುಂಚೆ ಅವರು ಕೈ ತೊಳೆಯದೆಹೋದುದನ್ನು ಕಂಡು ಫರಿಸಾಯನು ಚಕಿತನಾದನು.


ಅದಕ್ಕೆ ಉತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಿಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದೀಕ್ಷಾಸ್ನಾನ ಕೊಡುವರು.


“ನೀವು ದೇವರ ಆಜ್ಞೆಯನ್ನು ತೊರೆದು ಮಾನವನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ.


ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು.


“ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು