Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:7 - ಕನ್ನಡ ಸತ್ಯವೇದವು C.L. Bible (BSI)

7 ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜಿಮಿನ್ ಅಪ್ನಾವರ್ತಿ ಪಡ್ತಲೊ ಪಾವ್ಸ್ ಘೆವ್ನ್, ಕೊನಾಕ್ ತರಿಬಿ ಸೆತ್ ಕರುಕ್ ಅವಕಾಸ್ ಕರುನ್ ದಿಲ್ಲ್ಯಾ ತನ್ನಾ ಎವ್ಡಿಚ್ ದೆವಾಕ್ನಾ ಆಶಿರ್ವಾದ್ ಘೆವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:7
17 ತಿಳಿವುಗಳ ಹೋಲಿಕೆ  

ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ದುಃಖಿಸುತ್ತಾ ಬೀಜಬಿತ್ತಲು ಹೋದವನು I ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು II


ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II


ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.


ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು.


ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.


ವ್ಯವಸಾಯದ ಹುಟ್ಟುವಳಿಯಲ್ಲಿ ಮೊತ್ತಮೊದಲನೆಯ ಪಾಲು ಕಷ್ಟಪಟ್ಟ ರೈತನಿಗಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು