Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:8 - ಕನ್ನಡ ಸತ್ಯವೇದವು C.L. Bible (BSI)

8 ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಿಚ್ ಜಿಮಿನ್ ಭಾತಾಚ್ಯಾ ಬದ್ಲಾಕ್ ಅನಿ ನಕ್ಕೊ ಹೊಲ್ಲಿ ಝಾಡಾ ಚಿಗ್ರುಕ್ ಅವ್ಕಾಸ್ ದಿಲ್ಯಾರ್ ತೆಕಾ ದೆವ್ ಶರಾಪ್ ದಿತಾ, ಅನಿ ಕಾಟ್ಯಾಂಚ್ಯಾ ಝಾಡಾಕ್ನಿ ಆಗಿತ್ ಘಾಲುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:8
26 ತಿಳಿವುಗಳ ಹೋಲಿಕೆ  

ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.


ಯೇಸು ಆ ಮರಕ್ಕೆ, “ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ,” ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು.


ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.


ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಅದು ಬೆಳೆಯಲಿ ಮುಳ್ಳುಗಳನ್ನು ಗೋದಿಗೆ ಬದಲಾಗಿ ಹಣಜಿಹುಲ್ಲನು ಜವೆಗೋದಿಗೆ ಪ್ರತಿಯಾಗಿ.” ಇತಿ, ಯೋಬನ ಮಾತುಗಳು ಮುಗಿದವು.


ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.


ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.


ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು