Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:1 - ಕನ್ನಡ ಸತ್ಯವೇದವು C.L. Bible (BSI)

1 ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಮೆಲ್ಕಿಜೆದೇಕನು ಸಾಲೇವಿುನ ಅರಸನೂ ಪರಾತ್ಪರನಾದ ದೇವರ ಯಾಜಕನೂ ಆಗಿದ್ದನು; ರಾಜರನ್ನು ಹೊಡೆದು ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹ್ಯೊ ಮೆಲ್ಕಿಜೆದೆಕ್ ಸಾಲೆಮಾಚೊ ರಾಜಾ, ಅನಿ ಪವಿತ್ರ್ ದೆವಾಚೊ ಯಜ್ನ್ ಕರ್‍ತಲೊ ಹೊವ್ನ್ ಹೊತ್ತೊ, ರಾಜಾಕ್ನಿ ಹರ್‍ವುನ್ ಪರ್ತುನ್ ಯೆವ್‌ಲಾಗಲ್ಲ್ಯಾ ಅಬ್ರಾಹಾಮಾಕ್ ಗಾವ್ನ್ ಆಶಿರ್ವಾದ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:1
17 ತಿಳಿವುಗಳ ಹೋಲಿಕೆ  

ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?


ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II


“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ನೆನೆದರಾಗ ದೇವರೇ ತಮಗಾಶ್ರಯ ದುರ್ಗವೆಂದು I ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು II


ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.


ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.”


ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ:


ಆದರೂ ಬಂಡೆದ್ದು ಪರೀಕ್ಷಿಸಿದರು ಪರಾತ್ಪರ ದೇವರನು I ಕೈಗೊಂಡು ನಡೆಯದೆ ಹೋದರು ಆತನ ವಿಧಿನಿಯಮಗಳನು II


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.


ಆದರೆ ಲೇವಿಯ ಕುಲದವನಲ್ಲದ ಮೆಲ್ಕಿಸದೇಕನು ಅಬ್ರಹಾಮನಿಂದಲೇ ದಶಮಾಂಶವನ್ನು ಪಡೆದನು; ಮಾತ್ರವಲ್ಲದೆ, ದೇವರ ವಾಗ್ದಾನವನ್ನು ಪಡೆದ ಅಬ್ರಹಾಮನನ್ನೇ ಆಶೀರ್ವದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು