Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:15 - ಕನ್ನಡ ಸತ್ಯವೇದವು C.L. Bible (BSI)

15 ಹೀಗೆ ಕಾಣಿಸಿಕೊಂಡ ಯಾಜಕ ಮೆಲ್ಕಿಸದೇಕನನ್ನು ಹೋಲುವುದರಿಂದ ನಾವು ಹೇಳುವ ವಿಷಯ ಇನ್ನೂ ಸ್ಪಷ್ಟವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15-16 ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15-16 ಇದಲ್ಲದೆ ಬೇರೊಬ್ಬ ಯಾಜಕನು ಶರೀರಧರ್ಮ ವಿಷಯವಾದ ನಿಯಮದ ಪ್ರಕಾರವಾಗಿರದೆ ಮೆಲ್ಕಿಜೆದೇಕನ ಸಾದೃಶ್ಯದಲ್ಲಿ ನಿರ್ಲಯವಾದ ಜೀವದ ಶಕ್ತಿಯುಳ್ಳವನಾಗಿದ್ದು ಬರಬೇಕಾದದರಿಂದ ನಮ್ಮ ಸಿದ್ಧಾಂತ ಮತ್ತೂ ಸ್ವಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೆಲ್ಕಿಜೆದೇಕನಂತಹ ಮತ್ತೊಬ್ಬ ಯಾಜಕನು (ಯೇಸು) ಬಂದಿರುವುದರಿಂದ ಇವು ಮತ್ತಷ್ಟು ಸ್ಪಷ್ಟವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಏಳುತ್ತಾನೆಂಬುದು ಇನ್ನೂ ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮೆಲ್ಕಿಜೆದಕಾ ಸಾರ್ಕೊ ಅನಿ ಎಕ್ಲೊ ಯಾಜಕ್ ಜೆಜುಕ್ರಿಸ್ತ್ ಯೆಲ್ಲ್ಯಾಕ್ ಹೆ ಸಗ್ಳೆ ಅನಿ ಉಲ್ಲೆ ಚೊಕ್ಕ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:15
8 ತಿಳಿವುಗಳ ಹೋಲಿಕೆ  

“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II


ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?


ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಅವರೇ ಮತ್ತೊಂದು ಕಡೆಯಲ್ಲಿ : “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ.


ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ಇವರು ಯಾಜಕರಾದುದು ಅಳಿವಿಲ್ಲದ ಜೀವಶಕ್ತಿಯಿಂದ; ಕುಲಗೋತ್ರಗಳ ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು