Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:18 - ಕನ್ನಡ ಸತ್ಯವೇದವು C.L. Bible (BSI)

18 ಹಳೆಯ ಶಾಸನವು ಶಿಥಿಲವೂ ವಿಫಲವೂ ಆದಕಾರಣ, ಅದನ್ನು ರದ್ದುಗೊಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೆಂದರೆ ಮೊದಲಿದ್ದ ಆಜ್ಞೆಯು ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾಜಕನಾಗಿದ್ದೀ ಎಂದು ಹೇಳಿಯದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹಳೆಯ ನಿಯಮವು ದುರ್ಬಲವೂ ನಿಷ್ಪ್ರಯೋಜಕವೂ ಆಗಿದ್ದರಿಂದ ರದ್ದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಮೊದಲಿದ್ದ ಆಜ್ಞೆಯು ನಿರ್ಬಲವೂ ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುನ್ನೊ ನೆಮ್ ಬಳ್‍ ನತ್ತೊ ಅನಿ ಕಾಮಾಕ್ ಯೆಯ್ ನಸಲ್ಲೊ ಹೊಲ್ಲ್ಯಾಕ್ ಕಾಡುನ್ ಟಾಕುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:18
15 ತಿಳಿವುಗಳ ಹೋಲಿಕೆ  

ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ದೇವರು ಅಬ್ರಹಾಮನೊಂದಿಗೆ ಮಾಡಿಮುಗಿಸಿದ ಒಪ್ಪಂದವನ್ನು ನಾನೂರ ಮೂವತ್ತು ವರ್ಷಗಳಾದ ಮೇಲೆ ಬಂದ ಧರ್ಮಶಾಸ್ತ್ರದಿಂದ ರದ್ದುಪಡಿಸಲಾಗದು; ಆ ವಾಗ್ದಾನವನ್ನು ವ್ಯರ್ಥಪಡಿಸಲಾಗದು.


ಧರ್ಮಶಾಸ್ತ್ರಕ್ಕೆ ಅಧೀನರಾಗಲು ಆಶಿಸುವವರೇ, ನನಗೆ ಉತ್ತರ ಕೊಡಿ: ಅದೇ ಧರ್ಮಶಾಸ್ತ್ರ ಹೇಳುವುದನ್ನು ನೀವು ಕೇಳಿಲ್ಲವೇ?


ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು