Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:19 - ಕನ್ನಡ ಸತ್ಯವೇದವು C.L. Bible (BSI)

19 ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮೊಯ್ಜೆಚ್ಯಾ ಖಾಯ್ದ್ಯಾನ್ ಖಲೆಬಿ ಸಂಪುರ್ನತೆಕ್ ಹಾನುಕ್ ನಾ ಅತ್ತಾ ಅಮ್ಕಾ ಬರಿ ಖಬರ್ ಅನಿ ಬರೊಸೊ ದೆವಾಚ್ಯಾ ಜಗೊಳ್ ನ್ಹೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:19
29 ತಿಳಿವುಗಳ ಹೋಲಿಕೆ  

ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಇವೆಲ್ಲವೂ ಈ ಕಾಲದ ಪರಿಸ್ಥಿತಿಗೆ ಒಂದು ನಿದರ್ಶನವಾಗಿವೆ. ಈ ವ್ಯವಸ್ಥೆಯ ಪ್ರಕಾರ ಸಮರ್ಪಣೆಯಾಗುತ್ತಿದ್ದ ಕಾಣಿಕೆಗಳೂ ಬಲಿಗಳೂ ಆರಾಧಕನ ಅಂತರಂಗವನ್ನು ಪೂರ್ಣವಾಗಿ ಶುದ್ಧಗೊಳಿಸಲು ಅಸಮರ್ಥವಾಗಿದ್ದವು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.


ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.


ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.


ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಇದಲ್ಲದೆ, ಲೇವಿಯರು ಯಾಜಕರಾದಾಗ, ದೇವರು ಯಾವ ಶಪಥವನ್ನೂ ಮಾಡಲಿಲ್ಲ.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು