Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:24 - ಕನ್ನಡ ಸತ್ಯವೇದವು C.L. Bible (BSI)

24 ಯೇಸುವಾದರೋ ಚಿರಂಜೀವಿಯಾದುದರಿಂದ ಅವರ ಯಾಜಕತ್ವವು ಶಾಶ್ವತವಾಗಿ ಉಳಿಯುವಂಥಾದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನಾದರೋ ಸದಾಕಾಲವಿರುವದರಿಂದ ಆತನ ಯಾಜಕತ್ವವು ಮತ್ತೊಬ್ಬರಿಗೆ ಹೋಗುವಂಥದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಯೇಸು ಸದಾಕಾಲವೂ ಜೀವಿಸುವವನಾಗಿದ್ದಾನೆ. ಆತನು ತನ್ನ ಯಾಜಕ ಸೇವೆಯನ್ನು ಎಂದೆಂದಿಗೂ ನಿಲ್ಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜು ಕ್ರಿಸ್ತ್ ಕನ್ನಾಬಿ ಜಿತ್ತೊ ರಾತಲೊ ಹೊವ್ನ್ ಹಾಯ್, ಅನಿ ತೊ ಅಪ್ಲ್ಯಾ ಯಾಜಕ್ ಕಾಮ್ ಕನ್ನಾಬಿ ಇಬೆ ಕರಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:24
9 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರ ನೇಮಿಸುವ ಪ್ರಧಾನಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.


ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು