Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:26 - ಕನ್ನಡ ಸತ್ಯವೇದವು C.L. Bible (BSI)

26 ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜು ಕ್ರಿಸ್ತುಚ್ ಅಮ್ಕಾ ಪಾಜೆ ಹೊಲ್ಲೊ ಮೊಟೊ ಯಾಜಕ್, ತೊ ಪಾಪ್‍ ನಸಲ್ಲೊ, ಪರಿಶುದ್ದ್, ಬರೊ, ಪಾಪಾತ್ನಾ ಧುರ್ ಹೊತ್ತೊ ಹೊವ್ನ್ ಮಳ್ಬಾಕ್ಕಿಂತಾ ವೈಲೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:26
39 ತಿಳಿವುಗಳ ಹೋಲಿಕೆ  

ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.


ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”


ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.


ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


“ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


‘ಐದನೆಯ ದಿನ, ದೈನಿಕ ದಹನಬಲಿಯನ್ನು, ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಒಂಬತ್ತು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನು ಅರ್ಪಿಸಬೇಕು;


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಿನ ಪ್ರಾಕಾರಕ್ಕೆ ಬರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು