Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:3 - ಕನ್ನಡ ಸತ್ಯವೇದವು C.L. Bible (BSI)

3 ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ಜನ್ಮದ ಆರಂಭವೂ ಆಯುಷ್ಯದ ಅಂತ್ಯವೂ ಇಲ್ಲ. ಅವನು ದೇವರ ಮಗನಿಗೆ ಸಮಾನ ಮಾಡಲ್ಪಟ್ಟಿದ್ದಾನೆ. ಅವನು ನಿರಂತರವಾಗಿ ಯಾಜಕನಾಗಿರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮೆಲ್ಕಿಸೆದಕಾಕ್ ಬಾಬಾ, ಬಾಯ್ ಕೊನ್ ಮನ್ತಲೆ ಹೊಂವ್ದಿ ಅನಿ ತೊ ಕನ್ನಾ ಯೆಲ್ಲೊ, ಕನ್ನಾ ಉಪಾಜ್ಲೊ ಅನಿ ಕನ್ನಾ ಮರ್ಲೊ ಮನ್ತಲೆ ಕಾಯ್ಬಿ ಲಿವ್ನ್ ಥವಲ್ಲೆ ನಾ, ತೊ ದೆವಾಚ್ಯಾ ಪೊರಾ ಸಾರ್ಕೆ ಯಾಜಕ್ ಹೊವ್ನ್ ಸದಾಸರ್ವತಾಕ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:3
11 ತಿಳಿವುಗಳ ಹೋಲಿಕೆ  

“ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕನು,” ಎಂದು ಪವಿತ್ರಗ್ರಂಥ ಸಮರ್ಥಿಸುತ್ತದೆ.


ಆದರೆ ಲೇವಿಯ ಕುಲದವನಲ್ಲದ ಮೆಲ್ಕಿಸದೇಕನು ಅಬ್ರಹಾಮನಿಂದಲೇ ದಶಮಾಂಶವನ್ನು ಪಡೆದನು; ಮಾತ್ರವಲ್ಲದೆ, ದೇವರ ವಾಗ್ದಾನವನ್ನು ಪಡೆದ ಅಬ್ರಹಾಮನನ್ನೇ ಆಶೀರ್ವದಿಸಿದನು.


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. ಕೆಹಾತನು ನೂರ ಮೂವತ್ತ ಮೂರು ವರ್ಷ ಬದುಕಿದ್ದನು.


ಎರಡನೆಯ ತಿಂಗಳಿನ ಮೊದಲನೆ ದಿನ ಜನಸಮೂಹವನ್ನು ಕೂಡಿಸಿದರು. ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸಿನವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ, ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ನೊಂದಾಯಿಸಿಕೊಂಡರು.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು