Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:8 - ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ, ದಶಮಾಂಶವನ್ನು ಪಡೆಯುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು; ಅದನ್ನು ಪಡೆದ ಮೆಲ್ಕಿಸದೇಕನು ತಾನು ಅಮರ್ತ್ಯ ಯಾಜಕನೆಂದು ಸಾಕ್ಷ್ಯಾಧಾರ ಪಡೆದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಲೇವಿಯರ ಕ್ರಮವನ್ನು ನೋಡಿದರೆ ಸಾಯತಕ್ಕ ಮನುಷ್ಯರು ದಶಮಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಮೆಲ್ಕಿಜೆದೇಕನ ಕ್ರಮವನ್ನು ನೋಡಿದರೆ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವವನು ತಕ್ಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಲ್ಲಿ ದಶಮಭಾಗಗಳನ್ನು ತೆಗೆದುಕೊಳ್ಳುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು. ಆದರೆ ಅಲ್ಲಿ ತೆಗೆದುಕೊಳ್ಳುವ ಮೆಲ್ಕಿಜೆದೇಕನು ಜೀವಿಸುತ್ತಿದ್ದಾನೆಂದು ಸಾಕ್ಷಿ ಹೊಂದಿರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಬ್ರಾಹಾಮಾಕ್ನಾ ಧಾತ್ಲೊ ಎಕ್ ಭಾಗ್ ಘೆಟಲ್ಲೊ ಮೆಲ್ಕಿಜೆದೆಕ್ ಝಿತ್ತೊಚ್ ರ್‍ಹಾತಾ ಮನ್ತಲ್ಯಾಕ್ ಸಾಕ್ಷಿ ದಿಲ್ಲಿ ಹಾಯ್ , ಖರೆ ಹಿ ಯಾಜಕಾ ಧಾತ್ಲೊ ಎಕ್ ವಾಟೊ ಘೆತಾತ್ ಅನಿ ಉಲ್ಲೆಚ್ ದಿಸ್ ಜಿವಾನ್ ರ್‍ಹಾವ್ನ್ ಮಾನಾ ಲಗ್ಗುನಾಚ್ ಮರುನ್ ಜಾತಾತ್ ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:8
12 ತಿಳಿವುಗಳ ಹೋಲಿಕೆ  

ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ಅವರೇ ಮತ್ತೊಂದು ಕಡೆಯಲ್ಲಿ : “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಇಲ್ಲಿ, ದೇವರ ದನಿಯನು ಕೇಳಿಯೂ ದಂಗೆ ಎದ್ದವರು ಯಾರು? ಮೋಶೆಯ ಮುಂದಾಳತ್ವದಲ್ಲಿ ಈಜಿಪ್ಟ್ ದೇಶವನ್ನು ಬಿಟ್ಟುಬಂದ ಎಲ್ಲರೂ ಅಲ್ಲವೇ?


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಆಶೀರ್ವದಿಸುವವನು, ಆಶೀರ್ವಾದ ಪಡೆದವನಿಗಿಂತ ದೊಡ್ಡವನು ಎನ್ನುವುದು ನಿರ್ವಿವಾದ.


ಅಷ್ಟೇ ಅಲ್ಲ, ದಶಮಾಂಶವನ್ನು ತೆಗೆದುಕೊಳ್ಳುತ್ತಿದ್ದ ಲೇವಿಯೂ ಕೂಡ ಅಬ್ರಹಾಮನ ಮುಖಾಂತರ ದಶಮಾಂಶವನ್ನು ತೆತ್ತನು ಎಂದು ಹೇಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು