Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:10 - ಕನ್ನಡ ಸತ್ಯವೇದವು C.L. Bible (BSI)

10 ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಿಯಾ ಇಸ್ರಾಯೆಲ್ ಲೊಕಾಂಚ್ಯಾ ವಾಂಗ್ಡಾ ಯೆತಲ್ಯಾ ದಿಸಾತ್ನಿ ಕರುನ್ ಘೆತಲೆ ಕರಾಕ್ ಅಶೆ ಹಾಯ್! ಮಾಜೊ ಹುಕುಮ್ ತೆಂಚ್ಯಾ ಮನಾತ್ ಥವ್ತಾ; ಅನಿ ತೆಂಚ್ಯಾ ಮನಾತ್ನಿ ವೈರ್ ಲಿವ್ತಾ, ಮಿಯಾ ತೆಂಚೊ ದೆವ್ ಹೊವ್ನ್ ರ್‍ಹಾತಾ, ತೆನಿ ಮಾಜಿ ಲೊಕಾ ಹೊವ್ನ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:10
34 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನಾನು ಪರಿಹರಿಸುವೆನು ಅವರ ಪಾಪಗಳನ್ನು ಅವರೊಡನೆ ಮಾಡಿಕೊಳ್ಳುವೆನಾಗ ಒಡಂಬಡಿಕೆಯನು.”


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಸರ್ವೇಶ್ವರ ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಆಧಾರದ ಮೇಲೆ ನಾನು ನಿನ್ನೊಂದಿಗೂ ಇಸ್ರಯೇಲರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ,” ಎಂದು ಹೇಳಿದರು.


ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.


ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.


ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.


ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನು ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದುಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು.


“ಇಬ್ಬರೂ ಒಂದೇ ಶರೀರವಾಗುತ್ತಾರೆ,” ಎಂದು ಬರೆಯಲಾಗಿದೆ. ವೇಶ್ಯೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗುತ್ತಾನೆ, ಎಂದು ನಿಮಗೆ ತಿಳಿಯದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು