ಇಬ್ರಿಯರಿಗೆ 8:11 - ಕನ್ನಡ ಸತ್ಯವೇದವು C.L. Bible (BSI)11 ‘ಸರ್ವೇಶ್ವರನನ್ನು ಅರಿತುಕೊಳ್ಳಿರಿ’ ಎಂದು ನೆರೆಯವನಿಗಾಗಲಿ, ಸೋದರನಿಗಾಗಲಿ ಯಾರೂ ಬೋಧಿಸಬೇಕಾಗಿಲ್ಲ. ಹಿರಿಯಕಿರಿಯರು ಎಲ್ಲರೂ ನನ್ನನ್ನು ಅರಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒಂದೇ ಊರಿನವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಕರ್ತನ ಜ್ಞಾನವನ್ನು ಪಡೆಯಿರಿ ಎಂದು ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಎಕ್ಲೊಬಿ ಭಾವಾಕ್ ಹೊಂವ್ದಿ, ದುಸ್ರ್ಯಾಕ್ ಹೊಂವ್ದಿ ಕಾಯ್ ಶಿಕ್ವುತಲೆ ರ್‍ಹಾಯ್ನಾ, ದೆವಾಕ್ ಕಳ್ದುನ್ ಘೆವಾ ಮನ್ತಲೆ ರ್‍ಹಾಯ್ನಾ, ಕಶ್ಯಾಕ್ ಮಟ್ಲ್ಯಾರ್ ಲೈ ಮುಖ್ಯ್ ಹೊತ್ತ್ಯಾಂಚ್ಯಾಕ್ನಾ ಲೈ ಕಮಿಚ್ಯಾ ಮಾನ್ಸಾನ್ ಸಾಂಗಲ್ಲೆ ಸಗ್ಳ್ಯಾನಿಬಿ ಮಾಕಾ ವಳಕ್ತಾತ್. ಅಧ್ಯಾಯವನ್ನು ನೋಡಿ |