ಇಬ್ರಿಯರಿಗೆ 8:5 - ಕನ್ನಡ ಸತ್ಯವೇದವು C.L. Bible (BSI)5 ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹಿ ಯಾಜಕ್ ಲೊಕಾ ಕರ್‍ತಲಿ ಕಾಮಾ ಸರ್ಗಾತ್ಲ್ಯಾ ಕಾಮಾಂಚ್ಯಾ ಅನಿ ಎಕ್ ರುಪ್ ಅನಿ ಸಾವ್ಳಿ ಸಾರ್ಕೆ ಹಾತ್ ಮೊಯ್ಜೆನ್ ದೆವಾಚ್ಯಾ ಖಾಯ್ದ್ಯಾಚ್ಯಾ ಘರ್ ತಯಾರ್ ಕರುಕ್ ಲಾಗಲ್ಲ್ಯಾ ತನ್ನಾ ದೆವಾನ್ ತೆಕಾ ತಿ ಮಿಯಾ ಮಡ್ಡಿರ್ ಡಂಗ್ಳಿತ್ ತುಕಾ ದಾಕ್ವುಲ್ಯಾನ್ ಸಾರ್ಕೆಚ್ ಸಗ್ಳೆ ಲೈ ಹುರ್ಶಾಕಿನ್ ತಯಾರ್ ಕರುಚೆ ಮನುನ್ ಸಾಂಗ್ತಲೆ ಕಾರನಾಕುಚ್. ಅಧ್ಯಾಯವನ್ನು ನೋಡಿ |