ಇಬ್ರಿಯರಿಗೆ 8:9 - ಕನ್ನಡ ಸತ್ಯವೇದವು C.L. Bible (BSI)9 ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೊ ತೆಂಚ್ಯಾ ಬಾಬಾಂಚ್ಯಾಕ್ನಾ ಕರಲೊ ಸಾರ್ಕೊ ಕರಾರ್ ನ್ಹಯ್, ಮಿಯಾ ತೆಕಾ ಹಾತ್ ಧರುನ್ ಇಜಿಪ್ತಾಕ್ನಾ ಬಾಯ್ರ್ ಹಾನಲ್ಯಾ ವೆಳಾರ್ ತೆಂಚ್ಯಾ ವಾಂಗ್ಡಾ ಕರಾರ್ ಕರುನ್ ಘೆಟಲ್ಲೊ ಹೊಲ್ಯಾರ್, ತೆನಿ ತೆಚ್ಯಾ ಸಾರ್ಕೆ ಚಲುನ್ ಜಾವ್ಕ್ ಹೊವ್ಕ್ ನಾ, ತಸೆ ಮನುನ್ ಮಿಯಾ ತೆಂಚ್ಯಾಕ್ನಾ ದುಸ್ರ್ಯಾಕ್ಡೆ ಪರ್ತುನ್ ಬಸ್ಲೊ” ಮನುನ್ ದೆವ್ ಸಾಂಗ್ತಾ. ಅಧ್ಯಾಯವನ್ನು ನೋಡಿ |
ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.