Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:11 - ಕನ್ನಡ ಸತ್ಯವೇದವು C.L. Bible (BSI)

11 ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಕ್ರಿಸ್ತನು ಈಗ ದೊರೆತಿರುವ ಮೇಲುಗಳನ್ನು ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಸೃಷ್ಟಿಗೆ ಸಂಬಂಧಪಡದಂಥ ಘನವಾಗಿಯೂ ಉತ್ಕೃಷ್ಟವಾಗಿಯೂ ಇರುವ ಗುಡಾರದಲ್ಲಿ ಸೇವೆಯನ್ನು ಮಾಡುವವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕ್ರಿಸ್ತ್ ಅತ್ತಾ ಹಾಲಿ ಮುಖ್ಯ್ ಯಾಜಕ್ ಹೊವ್ನ್ ಯೆಲಾ, ಅತ್ತಾ ಅಮ್ಕಾ ಗಾವಲ್ಯಾ ಬರ್‍ಯಾ ಸಂಗ್ತಿಯಾಕ್ನಿ ತೊಚ್ ಮೊಟೊ ಯಾಜಕ್ ಹೊಲ್ಲೊ ಹಾಯ್, ಹುರಲ್ಲಿ ಯಾಜಕಾ ಸಗ್ಳಿ ದೆವಾಚ್ಯಾ ಗುಡಿತುಚ್ ಸೆವಾ ಕರಲಿ, ಕ್ರಿಸ್ತ್ ದೆವಾಚ್ಯಾ ಗುಡಿತ್ ಸೆವಾ ಕರಿನಸ್ತಾನಾ ತೆಚ್ಯಾಕ್ಕಿಂತಾಬಿ ಅಗ್ದಿ ಬರ್‍ಯಾ ಜಾಗ್ಯಾರ್ ಸೆವಾ ಕರ್‍ತಲೊ ತೆ ಪರಿಪುರ್ನ್ ಹೊಲ್ಲೆ ಮಾನ್ಸಾಕ್ನಾ ತಯಾರ್ ಹೊಲ್ಲೆ ನ್ಹಯ್, ಹ್ಯಾ ಜಗಾಕ್ ಮಿಳುಕ್ ಬಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:11
30 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಆಕೆ, “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ನಾನೋಗೊಡುತ ಇಂತೆಂದೆ : “ಇಗೋ ನಾನೇ ಬರುತ್ತಿರುವೆ I ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.


ಇವರು ಬಂದು, “ಯೊವಾನ್ನನು ತಿಳಿಯಪಡಿಸಿದ ಪ್ರಕಾರ ಬರಬೇಕಾದವರು ನೀವೋ? ಅಥವಾ ಬೇರೊಬ್ಬನನ್ನು ನಾವು ಎದುರುನೋಡಬೇಕೋ?" ಎಂದು ಯೇಸುವನ್ನು ಕೇಳಿದರು.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಅವರು ನನಗೆ ವಿರುದ್ಧವಾಗಿ ಮಾಡಿದ ಅಧರ್ಮವನ್ನೆಲ್ಲ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ನನಗೆ ವಿರುದ್ಧ ಮಾಡಿರುವ ಪಾಪದ್ರೋಹಗಳನ್ನೆಸಗಿ ಕಟ್ಟಿಕೊಂಡಿರುವ ಅಪರಾಧಗಳನ್ನೆಲ್ಲ ಕ್ಷಮಿಸುವೆನು.


ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ಏಕೆಂದರೆ, ಇಹದಲ್ಲಿ ಶಾಶ್ವತವಾದ ನಗರವು ನಮಗಿಲ್ಲ. ಬರಲಿರುವ ನಗರವನ್ನು ನಾವು ಎದುರುನೋಡುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು