Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:12 - ಕನ್ನಡ ಸತ್ಯವೇದವು C.L. Bible (BSI)

12 ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೊ ಎಕುಚ್ ಎಗ್ದಾ ಆಗ್ದಿ ಪವಿತ್ರ್ ಜಾಗ್ಯಾರ್ ಗುಸ್ಲೊ, ತೆನಿ ಪಾಲ್ವ್ಯಾಂಚೆ ಅನಿ ಪಾಡ್ಕ್ಯಾಂಚೆ ರಗಾತ್ ಘೆವ್ನ್ ಜಾಯ್ ನಸ್ತಾನಾ ಅಪ್ಲೆ ಸ್ವತಾಚೆ ರಗಾತ್ ಘೆವ್ನ್ ಆಗ್ದಿ ಪವಿತ್ರ್ ಜಾಗ್ಯಾರ್ ಜಾವ್ನ್ ಅಮ್ಕಾ ಪಾಪಾಚ್ಯಾ ಶಾಶ್ವತ್ ಗುಲಾಮ್ ಗಿರಿತ್ನಾ ಸುಟ್ಕಾ ಕರ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:12
32 ತಿಳಿವುಗಳ ಹೋಲಿಕೆ  

ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಅದಾದ ಮೇಲೆ ಜನರು ಸಮರ್ಪಿಸಿದ ಪ್ರಾಣಿಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಬಲಿಪ್ರಾಣಿಯಾಗಿ ವಧಿಸಿ ಜನರ ದೋಷಪರಿಹಾರಾರ್ಥವಾಗಿ ಸಮರ್ಪಿಸಿದನು.


ಹೋತಹೋರಿಗಳ ರಕ್ತವನ್ನೂ ಯಜ್ಞಪಶುಗಳ ಬೂದಿಯನ್ನೂ ಮಲಿನರಾದವರ ಮೇಲೆ ಚಿಮುಕಿಸುವುದರ ಮೂಲಕ ಶಾರೀರಕ ಮೈಲಿಗೆಯನ್ನು ಹೋಗಲಾಡಿಸಿ ಅವರನ್ನು ಪರಿಶುದ್ಧಗೊಳಿಸಬಹುದಾದರೆ,


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಮಾತ್ರ ಕ್ಷಮೆ ದೊರಕದು. ಅಂಥವನ ಪಾಪ ಶಾಶ್ವತವಾದುದು,” ಎಂದರು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು