Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:13 - ಕನ್ನಡ ಸತ್ಯವೇದವು C.L. Bible (BSI)

13 ಹೋತಹೋರಿಗಳ ರಕ್ತವನ್ನೂ ಯಜ್ಞಪಶುಗಳ ಬೂದಿಯನ್ನೂ ಮಲಿನರಾದವರ ಮೇಲೆ ಚಿಮುಕಿಸುವುದರ ಮೂಲಕ ಶಾರೀರಕ ಮೈಲಿಗೆಯನ್ನು ಹೋಗಲಾಡಿಸಿ ಅವರನ್ನು ಪರಿಶುದ್ಧಗೊಳಿಸಬಹುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೋತಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚೆಲ್ಲುವ ಕಡಸಿನ ಬೂದಿಯೂ ಶರೀರದ ಹೊಲೆಯನ್ನು ಹೋಗಲಾಡಿಸಿ ಪವಿತ್ರಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೋತಗಳ ಮತ್ತು ಹೋರಿಗಳ ರಕ್ತವನ್ನೂ ಹಸುಗಳ ಬೂದಿಯನ್ನೂ ಆ ಆರಾಧನೆಯ ಸ್ಥಳದಲ್ಲಿ ಪ್ರವೇಶಿಸುವಷ್ಟು ಶುದ್ಧರಾಗಿಲ್ಲದ ಜನರ ಮೇಲೆ ಚಿಮುಕಿಸಲಾಗುತ್ತಿತ್ತು. ಆ ರಕ್ತ ಮತ್ತು ಬೂದಿ ಜನರ ದೇಹಗಳನ್ನು ಮಾತ್ರ ಶುದ್ಧಿಗೊಳಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪಾಲ್ವ್ಯಾಂಚೆ ಅನಿ ಪಾಡ್ಕ್ಯಾಂಚೆ ರಗಾತ್, ಪಾಡಿಯಾಕ್ನಿ ಜಾಳ್ವುನ್ ಕರಲ್ಲಿ ರಕ್ಕಾ ತ್ಯಾ ಆರಾಧನಾಚ್ಯಾ ಜಾಗ್ಯಾರ್ ಗುಸಿ ಸಾರ್ಕೆ ಯೆವ್ಡೆ ಚೊಕ್ಕ್ ಪರಿಶುದ್ದ್ ನತ್ತ್ಯಾ ಲೊಕಾಂಚ್ಯಾ ಆಂಗಾರ್ ಸಿಪ್ಡಿತ್, ತೆ ರಗಾತ್ ಅನಿ ರಕ್ಕಾ ಮಾನ್ಸಾಂಚೆ ಆಂಗ್ ಎಕುಚ್ ಶುದ್ದ್ ಕರಿತ್ ತೆಂಚೊ ಮನ್ ಪವಿತ್ರ್ ಕರಿ ನಸಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:13
12 ತಿಳಿವುಗಳ ಹೋಲಿಕೆ  

ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಅಂಥವನನ್ನು ಶುದ್ಧನಾದ ಮೇಲೂ, ಏಳು ದಿವಸ ಪ್ರತ್ಯೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು