Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:14 - ಕನ್ನಡ ಸತ್ಯವೇದವು C.L. Bible (BSI)

14 ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಹೊವ್ನ್, ಕ್ರಿಸ್ತಾಚೆ ರಗಾತ್ ತೆಚ್ಯಾಕಿಂತಾಬಿ ಜಾಸ್ತಿಚೆಚ್ ಕರ್‍ತಾ, ಕ್ರಿಸ್ತಾನ್ ಕನ್ನಾಬಿ ರಾತಲ್ಯಾ ಆತ್ಮ್ಯಾಕ್ನಾ ಅಪ್ನಾಕುಚ್ ಅಪ್ನಿ ದೆವಾಚೊ ಯಜ್ನ್ ಕರುನ್ ದಿಲ್ಯಾನ್, ತೆಚೆ ರಗಾತ್ ಅಮ್ಕಾ ಅಮಿ ಬುರ್ಶ್ಯಾ ಕಾಮಾನಿತ್ನಾ ಸುಟ್ಕಾ ಕರುನ್ ಘೆವ್ನ್ ಜಿವ್ ಹೊತ್ತ್ಯಾ ದೆವಾಕ್ ಆರಾದನ್ ಕರುಕ್ ಹೊಯ್ ಸಾರ್ಕೆ ಅಮ್ಚೊ ಮನ್ ಚೊಕ್ಕ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:14
76 ತಿಳಿವುಗಳ ಹೋಲಿಕೆ  

ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.


ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ?


ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ II


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ಧರ್ಮಶಾಸ್ತ್ರದ ಮೂಲಕ, ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ನೀನು ಕಾಡು ಓಲಿವ್ ಮರದಿಂದ ಕಡಿದ ರೆಂಬೆ. ಉತ್ತಮ ತಳಿಯ ಓಲಿವ್ ಮರಕ್ಕೆ ಕೃತಕವಾಗಿ ಕಸಿಕಟ್ಟಲಾಗಿರುವೆ. ಇಸ್ರಯೇಲರಾದರೋ ಉತ್ತಮ ತಳಿಯ ಓಲಿವ್ ಮರದಲ್ಲೇ ಹುಟ್ಟಿ ಬೆಳೆದ ರೆಂಬೆಗಳು. ಅದೇ ಮರದಲ್ಲಿ ಹುಟ್ಟಿ ಬೆಳೆದ ರೆಂಬೆಗಳನ್ನು ಕಡಿದು ಮತ್ತೆ ಅದಕ್ಕೆ ಕಸಿಕಟ್ಟುವುದು ಎಷ್ಟೋ ಸುಲಭವಲ್ಲವೆ?


ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಕುಂದುಕೊರತೆ ಇರುವಂಥದನ್ನು ಒಪ್ಪಿಸಬಾರದು; ಅದು ಸ್ವೀಕೃತವಾಗುವುದಿಲ್ಲ.


ವಿಶ್ವಾಸದಿಂದಲೇ ಯಕೋಬನು, ತಾನು ಸಾಯುವ ಸಮಯದಲ್ಲಿ ಜೋಸೆಫನ ಪ್ರತಿಯೊಬ್ಬ ಮಗನನ್ನೂ ಆಶೀರ್ವದಿಸಿದನು; ಊರುಗೋಲಿನ ಮೇಲೆ ಬಾಗಿಕೊಂಡೇ ದೇವರನ್ನು ಆರಾಧಿಸಿದನು.


ಇವೆಲ್ಲವೂ ಈ ಕಾಲದ ಪರಿಸ್ಥಿತಿಗೆ ಒಂದು ನಿದರ್ಶನವಾಗಿವೆ. ಈ ವ್ಯವಸ್ಥೆಯ ಪ್ರಕಾರ ಸಮರ್ಪಣೆಯಾಗುತ್ತಿದ್ದ ಕಾಣಿಕೆಗಳೂ ಬಲಿಗಳೂ ಆರಾಧಕನ ಅಂತರಂಗವನ್ನು ಪೂರ್ಣವಾಗಿ ಶುದ್ಧಗೊಳಿಸಲು ಅಸಮರ್ಥವಾಗಿದ್ದವು.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


“ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು.


ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು!


ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!


ನಾನು ದೇವರ ಆತ್ಮದಿಂದ ದೆವ್ವಗಳನ್ನು ಬಿಡಿಸುವುದಾದರೆ, ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ.


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!”


ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


“ಅದು ಕುಂಟಾಗಿ, ಕುರುಡಾಗಿ, ಇಲ್ಲವೆ ಬೇರೆ ವಿಧದಲ್ಲಿ ದೋಷವುಳ್ಳದ್ದಾಗಿದ್ದರೆ ಅದನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯಾಗಿ ಸಮರ್ಪಿಸಕೂಡದು;


ಆ ವಿಷಯದಲ್ಲಿ ನೀನು ಅವರಿಗೆ ಹೀಗೆಂದು ಅಪ್ಪಣೆಮಾಡು:


ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು?


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?


‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಕಳಂಕರಹಿತವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ಇವರು ಯಾಜಕರಾದುದು ಅಳಿವಿಲ್ಲದ ಜೀವಶಕ್ತಿಯಿಂದ; ಕುಲಗೋತ್ರಗಳ ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.


ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು