Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:19 - ಕನ್ನಡ ಸತ್ಯವೇದವು C.L. Bible (BSI)

19 ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮೋಶೆಯು ದೇವರ ವಿಧಿಗಳನ್ನೆಲ್ಲಾ ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೆ, ಹಿಸ್ಸೋಪು ಕಡ್ಡಿ ಇವುಗಳೊಂದಿಗೆ ಹೋರಿಕರಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅದ್ದಿ ಮೊಯ್ಜೆಚೆ ಖಾಯ್ದ್ಯಾಚೆ ಹುಕುಮ್ ಲೊಕಾಕ್ನಿ ಕಳ್ವುಲ್ಯಾನ್, ತೆಚ್ಯಾ ಮಾನಾ ಪಾಡ್ಕ್ಯಾಂಚೆ ಅನಿ ಪಾಲ್ವ್ಯಾಂಚೆ ರಗಾತ್ ಘೆವ್ನ್ ಪಾನಿಯಾತ್ ಮಿಳ್ವುಲ್ಯಾನ್, ಪಾನಿ, ಅನಿ ರಗಾತ್ ಪವಿತ್ರ್ ಪುಸ್ತಕಾತ್ ಅನಿ ಲೊಕಾಂಚೆರ್ ಹೆ ಸಿಪ್ಡುಕ್ ತಾಂಬ್ಡೊ ಕಾಪುಸ್ ಅನಿ ಹಿಸ್ಸೊಪ್ ಝಾಡಾಚಿ ಟಾಳಿ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:19
26 ತಿಳಿವುಗಳ ಹೋಲಿಕೆ  

ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.


ಯಾಜಕನು ದೇವದಾರು ಮರದ ಕಟ್ಟಿಗೆಯನ್ನು ಹಿಸ್ಸೋಪ್ ಗಿಡದ ಬರಲನ್ನು ಮತ್ತು ರಕ್ತವರ್ಣದ ದಾರವನ್ನು ತೆಗೆದುಕೊಂಡು ಆ ಆಕಳನ್ನು ದಹಿಸುವ ಬೆಂಕಿಯಲ್ಲಿ ಹಾಕಬೇಕು.


ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ !” ಎಂದನು.


ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು,


ಹೀಗೆ ಯೇಸುವನ್ನು ಪರಿಹಾಸ್ಯಮಾಡಿದ ಬಳಿಕ, ಆ ನಸುಗೆಂಪು ಮೇಲಂಗಿಯನ್ನು ತೆಗೆದುಹಾಕಿ, ಅವರ ಬಟ್ಟೆಯನ್ನೇ ಮತ್ತೆ ತೊಡಿಸಿದರು. ಬಳಿಕ ಶಿಲುಬೆಗೆ ಏರಿಸುವುದಕ್ಕಾಗಿ ಅವರನ್ನು ಕರೆದುಕೊಂಡುಹೋದರು.


ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿದರು. ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು.


ಸೈನಿಕರು ಅವರ ಉಡುಪನ್ನು ಸುಲಿದು, ಕಡುಗೆಂಪು ಮೇಲಂಗಿಯೊಂದನ್ನು ಅವರಿಗೆ ಹೊದಿಸಿದರು.


ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.


“ಶಾಂತಿಸಮಾಧಾನಕ್ಕಾಗಿ ಸರ್ವೇಶ್ವರನಿಗೆ ಸಮರ್ಪಿಸುವ ಬಲಿಪ್ರಾಣಿ ಕುರಿ ಅಥವಾ ಆಡು ಆಗಿದ್ದರೆ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಹಿಸ್ಸೋಪ್ ಗಿಡದ ಕುಚ್ಚನ್ನು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಿಲಿನ ಪಟ್ಟಿಗೂ ಅದರ ನಿಲುವು ಕಂಬಗಳೆರಡಕ್ಕೂ ಹಚ್ಚಿರಿ. ಬಳಿಕ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದವರೆಗೆ ಬಾಗಿಲಿನಿಂದ ಹೊರಗೆ ಹೋಗಕೂಡದು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ಹೋತಹೋರಿಗಳ ರಕ್ತವನ್ನೂ ಯಜ್ಞಪಶುಗಳ ಬೂದಿಯನ್ನೂ ಮಲಿನರಾದವರ ಮೇಲೆ ಚಿಮುಕಿಸುವುದರ ಮೂಲಕ ಶಾರೀರಕ ಮೈಲಿಗೆಯನ್ನು ಹೋಗಲಾಡಿಸಿ ಅವರನ್ನು ಪರಿಶುದ್ಧಗೊಳಿಸಬಹುದಾದರೆ,


ಆದ್ದರಿಂದಲೇ, ಮೊದಲನೆಯ ಒಡಂಬಡಿಕೆ ಕೂಡ ರಕ್ತಧಾರೆ ಇಲ್ಲದೆ ಪ್ರತಿಷ್ಠಾಪನೆಗೊಳ್ಳಲಿಲ್ಲ.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು