Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:2 - ಕನ್ನಡ ಸತ್ಯವೇದವು C.L. Bible (BSI)

2 ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ ಜಾಗೊ ಬಿರಾಡಾಚ್ಯಾ ಭುತ್ತುರ್ ಬಲ್‍ಯಿತ್ ಹೊತ್ತೊ, ತ್ಯಾ ಘರಾಚ್ಯಾ ಪೈಲೆಚ್ಯಾ ಖೊಲಿಕ್ ಪವಿತ್ರ್ ಜಾಗೊ ಮನುನ್ ತ್ಯಾ ಪವಿತ್ರ್ ಜಾಗ್ಯಾರ್ ಚಿಮ್ನಿಚೊ ಖಾಂಬೊ ಮೆಜ್ ಅನಿ ದೆವಾಕ್ ಮನುನ್ ಭೆಟ್ವಲ್ಲಿ ಭಾಕ್ರಿಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:2
21 ತಿಳಿವುಗಳ ಹೋಲಿಕೆ  

ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು.


ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪವೃಕ್ಷವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು.


“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸು.


ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ತೆರೆಯು ಪವಿತ್ರಸ್ಥಾನವೆಂಬುದನ್ನೂ ಮಹಾಪವಿತ್ರಸ್ಥಾನವೆಂಬುದನ್ನೂ ಬೇರೆ ಬೇರೆ ಮಾಡುವುದು.


ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚರಣೆಯನ್ನು ನಡೆಸಿ ಆರೋನ ಮತ್ತು ಅವನ ಮಕ್ಕಳನ್ನು ಯಾಜಕ ಸೇವೆಗೆ ಅಭಿಷೇಕಿಸು.


“ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗಿ ಸೇವೆ ಸಲ್ಲಿಸುವಂತೆ ನೀನು ಅವರನ್ನು ಹೀಗೆ ಪ್ರತಿಷ್ಠಿಸು: ಕಳಂಕರಹಿತವಾದ ಒಂದು ಹೋರಿಕರುವನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


“ಜಾಲೀ ಮರದಿಂದ ಒಂದು ಮೇಜನ್ನು ಮಾಡಿಸು. ಅದು ಎರಡು ಮೊಳ ಉದ್ದ ಒಂದು ಮೊಳ ಅಗಲ ಹಾಗು ಒಂದುವರೆ ಮೊಳ ಎತ್ತರವಾಗಿರಲಿ.


ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.


“ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು.


“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.


ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?


ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು