Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:21 - ಕನ್ನಡ ಸತ್ಯವೇದವು C.L. Bible (BSI)

21 ಅಂತೆಯೇ ಗುಡಾರದ ಮೇಲೂ ದೇವಾರಾಧನೆಗೆ ಬೇಕಾದ ಎಲ್ಲಾ ಪೂಜಾಸಾಮಗ್ರಿಗಳ ಮೇಲೂ ಆ ರಕ್ತವನ್ನು ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಉಪಕರಣಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದೇರೀತಿ, ಮೋಶೆಯು ರಕ್ತವನ್ನು ಗುಡಾರದ ಮೇಲೆಯೂ ಆರಾಧನೆಯಲ್ಲಿ ಬಳಸುವ ಎಲ್ಲಾ ವಸ್ತುಗಳ ಮೇಲೆಯೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದೇ ರೀತಿಯಾಗಿ ಮೋಶೆಯು ಗುಡಾರದ ಮೇಲೆಯೂ ಸೇವೆಯ ಎಲ್ಲಾ ಉಪ ಪಾತ್ರೆಗಳ ಮೇಲೆಯೂ ರಕ್ತವನ್ನು ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ ತಸೊಚ್ ಮೊಯ್ಜೆನ್ ತೆ ರಗಾತ್ ಬಿರಾಡಾರ್ , ಅನಿ ವಾಪರ್‍ತಲ್ಯಾ ಜಿನ್ಸಾರ್ನಿ ಸಿಪಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:21
12 ತಿಳಿವುಗಳ ಹೋಲಿಕೆ  

ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ಪ್ರತಿದಿನದಲ್ಲೂ ಪಾಪಪರಿಹಾರಕ್ಕಾಗಿ ಒಂದು ಹೋರಿಯನ್ನು ಬಲಿದಾನ ಮಾಡು. ಅದೂ ಅಲ್ಲದೆ ಬಲಿಪೀಠವನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ಪಾಪಪರಿಹಾರಕ ಬಲಿಯನ್ನು ಸಮರ್ಪಿಸಿ, ಆ ಪೀಠವನ್ನು ದೇವರ ಸೇವೆಗೋಸ್ಕರ ಅಭಿಷೇಕಿಸು.


ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲ ಬಲಿಪೀಠದ ಬುಡಕ್ಕೆ ಸುರಿಯಬೇಕು.


ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.


ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ಮಿಕ್ಕ ರಕ್ತವನ್ನು ಬಲಿಪೀಠದ ನಾಲ್ಕು ಕಡೆಗಳಿಗೂ ಸುರಿ.


ಆ ಬಲಿಪಶುಗಳ ರಕ್ತದಲ್ಲಿ ಅರ್ಧವನ್ನು ತೆಗೆದು ಬಟ್ಟಲುಗಳಲ್ಲಿ ತುಂಬಿದನು. ಮಿಕ್ಕ ಅರ್ಧವನ್ನು, ಬಲಿಪೀಠದ ಮೇಲೆ ಪ್ರೋಕ್ಷಿಸಿದನು.


ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು