Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:25 - ಕನ್ನಡ ಸತ್ಯವೇದವು C.L. Bible (BSI)

25 ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯ ರಕ್ತವನ್ನು ತೆಗೆದುಕೊಂಡು ಪವಿತ್ರಾಲಯದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪರಲೋಕದಲ್ಲಿ ಪ್ರವೇಶಿಸಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜುದೆವಾಂಚೊ ಮೊಟೊ ಯಾಜಕ್ ವರ್ಸಾಕ್ ಎಗ್ದಾ ಅಗ್ದಿ ಪವಿತ್ರ್ ಜಾಗ್ಯಾರ್ ಜಾತಾನಾ ಜನಾವರಾಂಚೆ ರಗಾತ್ ಅಪ್ಲ್ಯಾ ವಾಂಗ್ಡಾ ದೆವಾಕ್ ಒಪ್ಸುಕ್ ಮನುನ್ ಘೆವ್ನ್ ಜಾಯ್ತ್, ಖರೆ ಕ್ರಿಸ್ತ್ ಪರ್ತುನ್ ಭೆಟ್ಟುಕ್ ಮನುನ್ ಜಾವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:25
9 ತಿಳಿವುಗಳ ಹೋಲಿಕೆ  

ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.


ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.


ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು