Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:27 - ಕನ್ನಡ ಸತ್ಯವೇದವು C.L. Bible (BSI)

27 ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹರ್ ಎಕ್ಲೊಬಿ ಎಗ್ದಾಚ್ ಮರ್‍ತಲೊ ಮಾನಾ ತೆಂಕಾ ದೆವಾಚ್ಯಾ ಇದ್ರಾಕ್ ನ್ಯಾಯ್ ನಿರ್‍ನಯ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:27
28 ತಿಳಿವುಗಳ ಹೋಲಿಕೆ  

ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.


ಎಲ್ಲ ಪ್ರಾಣಿಗಳೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು, ಎಲ್ಲವೂ ಮರಳಿ ಮಣ್ಣಿಗೆ ಸೇರುತ್ತವೆ.


ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.


ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ಕಟ್ಟಕಡೆಗೆ ಆ ಮಹಿಳೆಯೂ ಮರಣಹೊಂದಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು