Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:28 - ಕನ್ನಡ ಸತ್ಯವೇದವು C.L. Bible (BSI)

28 ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತಸೆಚ್ ಕ್ರಿಸ್ತ್ ಬಿ ಲೈ ಲೊಕಾಂಚೊ ಪಾಪ್ ಕಾಡುನ್ ಘಾಲುಕ್ ಎಕುಚ್ ಎಗ್ದಾ ಅಪ್ನಾಕ್ ಬಲಿ ಹೊವ್ನ್ ಒಪ್ಸುನ್ ಘೆಟ್ಲ್ಯಾನ್, ಕ್ರಿಸ್ತ್ ದೊನ್ವೆದಾ ಯೆತಲೊ ಲೊಕಾಂಚೊ ಪಾಪ್ ಕಾಡುಕ್ ನ್ಹಯ್ ಅಪ್ನಾಸಾಟ್ನಿ ರಾಕಿತ್ ಹೊತ್ತ್ಯಾ ಲೊಕಾಕ್ನಿ ಸುಟ್ವುನ್ ನ್ಹೆವ್ ಸಾಟ್ನಿ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:28
42 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:


ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.


ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.


“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?


ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.


ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.


ದಹನ ಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು