Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:5 - ಕನ್ನಡ ಸತ್ಯವೇದವು C.L. Bible (BSI)

5 ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದರ ಮೇಲೆ ದೇವರ ಪ್ರಭಾವವನ್ನು ಸೂಚಿಸುವ ಕೆರೂಬಿಗಳು ಕೃಪಾಸನವನ್ನು ಆಚ್ಫಾದಿಸಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಒಂದೊಂದಾಗಿ ವಿವರಿಸುವದಕ್ಕೆ ಆಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತ್ಯಾ ಡೆವ್ಳಿಯಾ ವೈನಿ ದೆವಾಚೊ ವೈಭವ್ ದಾಕ್ವುತಲಿ ಚಿತ್ರಾ ಕೆರುಬಿ ಹೊತ್ತಿ, ತೆ ದೆವಾಚೆ ಹಾಜಿರ್ ಪಾನ್ ದಾಕ್ವಿತ್ ತ್ಯಾ ಫಾಕಾಟ್ಯಾನಿ ಎಕ್ ಸಿವಾಸನ್ ನಿಪ್ವುನ್ ಥವಲ್ಯಾನಿ, ತ್ಯಾ ಜಾಗ್ಯಾ ವೈನಾ ಪಾಪಾಂಚಿ ಮಾಪಿ ಹೊಯ್ತ್ ಹೊತ್ತಿ, ಅತ್ತಾ ಅಮ್ಚ್ಯಾ ಕಡೆ ಹೆ ಸಗ್ಳೆ ಸಾಂಗುಕ್ ವೆಳ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:5
15 ತಿಳಿವುಗಳ ಹೋಲಿಕೆ  

ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು