ಎಜ್ರ 1:1 - ಕನ್ನಡ ಸತ್ಯವೇದವು C.L. Bible (BSI)1 ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |