Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:5 - ಕನ್ನಡ ಸತ್ಯವೇದವು C.L. Bible (BSI)

5 ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಪ್ರಧಾನರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇವಿುನಲ್ಲಿ ಯೆಹೋವನಿಗೋಸ್ಕರ ಆಲಯಕಟ್ಟುವದಕ್ಕಾಗಿ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:5
11 ತಿಳಿವುಗಳ ಹೋಲಿಕೆ  

ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಆಮೇಲೆ ಜೆರುಸಲೇಮಿಗಾಗಿ ಮಾಡತಕ್ಕ ಕಾರ್ಯದ ಬಗ್ಗೆ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾರೆಂದು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆ. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.


ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ,


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು.


ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು