Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:6 - ಕನ್ನಡ ಸತ್ಯವೇದವು C.L. Bible (BSI)

6 ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರ ನೆರೆಹೊರೆಯವರು ಅವರಿಗೆ ತುಂಬಾ ಕಾಣಿಕೆಗಳನ್ನು ಕೊಟ್ಟರು. ಅವರಿಗೆ ಬೆಳ್ಳಿಬಂಗಾರಗಳನ್ನು, ಪಶುಗಳನ್ನು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಧಾರಾಳವಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:6
12 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿ ಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗ ಯೋಜಾಬಾದ್, ಬಿನ್ನೂಯನ ಮಗ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.


ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು.


ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.


ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.


ಮೋಶೆ ಹೇಳಿಕೊಟ್ಟ ಹಾಗೆ ಈಜಿಪ್ಟಿನವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಗಳನ್ನು ಕೇಳಿಕೊಂಡರು.


ಇಸ್ರಯೇಲರ ಮೇಲೆ ಈಜಿಪ್ಟಿನವರಿಗೆ ದಯೆ ಹುಟ್ಟುವಂತೆ ಮಾಡಿದ್ದರು ಸರ್ವೇಶ್ವರ. ಆದ್ದರಿಂದ ಅವರು ಕೇಳಿಕೊಂಡದ್ದನ್ನು ಈಜಿಪ್ಟಿನವರು ಕೊಟ್ಟುಬಿಟ್ಟರು. ಹೀಗೆ ಇಸ್ರಯೇಲರು ಈಜಿಪ್ಟಿನವರ ಸೊತ್ತನ್ನು ಸುಲಿಗೆ ಮಾಡಿಕೊಂಡರು.


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು