Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:7 - ಕನ್ನಡ ಸತ್ಯವೇದವು C.L. Bible (BSI)

7 ಜೆರುಸಲೇಮಿನಿಂದ ಕೊಳ್ಳೆಹೊಡೆದು ತಂದಿದ್ದ ಸಾಮಾನುಗಳನ್ನು ನೆಬೂಕದ್ನೆಚ್ಚರನು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿಂದ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪರ್ಷಿಯ ರಾಜನಾದ ಕೋರೆಷನು ಅಲ್ಲಿಂದ ತೆಗೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪಾರಸಿಯ ರಾಜನಾದ ಕೋರೆಷನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಲ್ಲದೆ ಸೈರಸ್ ರಾಜನು ದೇವಾಲಯಕ್ಕೆ ಸಂಬಂಧಿಸಿದ ವಸ್ತುಗಳನ್ನೆಲ್ಲಾ ಹೊರತೆಗೆದನು. ನೆಬೂಕದ್ನೆಚ್ಚರ ಅರಸನು ಜೆರುಸಲೇಮ್ ದೇವಾಲಯದಿಂದ ಸೂರೆಮಾಡಿ ತಂದ ಸಾಮಾಗ್ರಿಗಳನ್ನು ತನ್ನ ವಿಗ್ರಹಗಳನ್ನಿಡುವ ಕೋಣೆಯಲ್ಲಿ ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:7
13 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಲಯದ ಹಲವು ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.


ಇದಲ್ಲದೆ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಬಂದ ಬೆಳ್ಳಿಬಂಗಾರದ ದೇವಸ್ಥಾನದ ಪಾತ್ರೆಗಳನ್ನು ಹಿಂದಕ್ಕೆ ಕೊಡಬೇಕು. ಅವುಗಳನ್ನೆಲ್ಲ ಮೊದಲಿದ್ದ ಸ್ಥಳಕ್ಕೆ ಅಂದರೆ, ಜೆರುಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು.”


ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು.


ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು