Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆ ಮಾಡಿಕೊಂಡು ಇಸ್ರಯೇಲರ ಅಪರಾಧವನ್ನು ಹೆಚ್ಚಿಸಿ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ - ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲ್ಯರ ಅಪರಾಧವನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನೆಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ, “ನೀವು ಇಸ್ರಾಯೇಲರ ಅಪರಾಧವನ್ನು ಅಧಿಕವಾಗಿ ಮಾಡಲು, ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದರಿಂದ ದ್ರೋಹ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:10
8 ತಿಳಿವುಗಳ ಹೋಲಿಕೆ  

ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ.


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


“ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿ; ನೀವು ನಮ್ಮ ಪಾಪಾಪರಾಧಗಳ ಜೊತೆಗೆ ಸರ್ವೇಶ್ವರನಿಗೆ ವಿರುದ್ಧ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರೋ? ನಮ್ಮ ಅಪರಾಧ ದೊಡ್ಡದು; ಇಸ್ರಯೇಲರ ಮೇಲಿರುವ ದೈವಕೋಪ ಉಗ್ರವಾಗಿದೆ!” ಎಂದು ಹೇಳಿದರು.


ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.


ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು.


ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.


ಹೀಗಿರುವಲ್ಲಿ, ನಾವು ಪುನಃ ನಿಮ್ಮ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ವಿವಾಹ ಸಂಬಂಧ ಬೆಳೆಸುವುದು ಯೋಗ್ಯವೇ? ಹಾಗೆ ಮಾಡಿದರೆ, ನೀವು ನಮ್ಮ ಮೇಲೆ ರೌದ್ರಾವೇಶವುಳ್ಳವರಾಗಿ, ಯಾರೂ ತಪ್ಪಿಸಿಕೊಳ್ಳದಂತೆ ನಮ್ಮನ್ನು ಮುಗಿಸಿಬಿಡುವಿರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು