Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:11 - ಕನ್ನಡ ಸತ್ಯವೇದವು C.L. Bible (BSI)

11 ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈಗ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:11
24 ತಿಳಿವುಗಳ ಹೋಲಿಕೆ  

ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು : “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಇಸ್ರಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲ ಮಿಶ್ರಜಾತಿ ಅವರನ್ನು ತಮ್ಮ ಮಧ್ಯೆಯಿಂದ ಬೇರ್ಪಡಿಸಿದರು.


ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.


ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.


ಆಗ ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆ ಮಾಡಿಕೊಂಡು ಇಸ್ರಯೇಲರ ಅಪರಾಧವನ್ನು ಹೆಚ್ಚಿಸಿ ಇದ್ದೀರಿ.


ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀವು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.


ಇಸ್ರಯೇಲ್ ಸಂತಾನದವರು, ಎಲ್ಲ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದುಕೊಳ್ಳಿ. ಹಾಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು