ಎಜ್ರ 10:16 - ಕನ್ನಡ ಸತ್ಯವೇದವು C.L. Bible (BSI)16 ಆದರೆ ಸೆರೆಯಿಂದ ಮರಳಿ ಬಂದ ಇತರರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕ ಎಜ್ರನೂ ಆಯಾ ಗೋತ್ರಗಳ ಮುಖಂಡರೂ ಹೆಸರು ಹೆಸರಾಗಿ ನೇಮಕಗೊಂಡರು. ಹತ್ತನೆಯ ತಿಂಗಳಿನ ಮೊದಲನೆಯ ದಿನ, ಇವರ ಮೊದಲನೆಯ ಕೂಟ ನಡೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡಿಸುವದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರೂ ಹೆಸರುಹೆಸರಾಗಿ ನೇವಿುಸಲ್ಪಟ್ಟರು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಕೂಟ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿ |