Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:18 - ಕನ್ನಡ ಸತ್ಯವೇದವು C.L. Bible (BSI)

18 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ ಇದು: ಯಾಜಕರಲ್ಲಿ : ಯೋಚಾದಾಕನ ಮಗ ಯೆಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರಂದರೆ - ಯಾಜಕರಲ್ಲಿ - ಯೋಚಾದಾಕನ ಮಗ ಯೇಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:18
27 ತಿಳಿವುಗಳ ಹೋಲಿಕೆ  

ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.


ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


“ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು ! ನನ್ನಾಲಯದಲ್ಲೆ ಅವರು ನಡೆಸುವ ಕೆಟ್ಟತನವನ್ನು ನಾನು ಕಂಡಿರುವೆನು.


ಮಹಾಯಾಜಕ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದುದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆ.


ಯೇಷೂವನಿಗೆ ಯೋಯಾಕೀಮನು, ಯೋಯಾಕೀಮನಿಗೆ ಎಲ್ಯಾಷೀಬನು, ಎಲ್ಯಾಷೀಬನಿಗೆ ಯೋಯಾದನು,


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.


ಧರ್ಮೋಪದೇಶಕ ಎಜ್ರನು ಪಾರಾಯಣಕ್ಕಾಗಿ ಮಾಡಲಾಗಿದ್ದ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರು ಇದ್ದರು. ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರು ನಿಂತಿದ್ದರು.


ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,


ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ವಿಷಯವನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನವೇ ಪೂರ್ತಿಯಾಗಿ ವಿಚಾರಿಸಿ ತೀರ್ಮಾನಿಸಿದರು.


ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.


ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.


ಅವರಿಂದ ಪಡೆದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಒಂದು ಕಿರೀಟವನ್ನು ಮಾಡಿಸು. ಅದನ್ನು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಗೆ ತೊಡಿಸು.


ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.


ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು