2 ಆಗ ಏಲಾಮ್ ಸಂತಾನದ ಯೆಹೀಯೇಲನ ಮಗ ಶೆಕನ್ಯನು ಎಜ್ರನಿಗೆ, “ಇಸ್ರಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧ ದ್ರೋಹಮಾಡಿದ್ದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆ ಇನ್ನೂ ಉಂಟು.
2 ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.
2 ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ - ಇಸ್ರಾಯೇಲ್ಯರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ [ನಮ್ಮನ್ನು ನಾವು ತಿದ್ದಿಕೊಳ್ಳುವ] ನಿರೀಕ್ಷೆಯು ಇನ್ನೂ ಉಂಟು.
2 ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗೆಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ.
2 ಆಗ ಏಲಾಮನ ವಂಶಜರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ನಾವು ಅನ್ಯದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡದ್ದರಿಂದ, ನಮ್ಮ ದೇವರಿಗೆ ವಿರೋಧವಾಗಿ ದ್ರೋಹಮಾಡಿದ್ದೇವೆ. ಆದರೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲರಲ್ಲಿ ನಿರೀಕ್ಷೆ ಉಂಟು.
ಹೀಗಿರಲಾಗಿ, ನೀವೂ ಅನ್ಯಮಹಿಳೆಯರನ್ನು ಮದುವೆಮಾಡಿಕೊಂಡು, ಅದೇ ಘೋರವಾದ ದುಷ್ಕೃತ್ಯವನ್ನು ನಡೆಸಿ, ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳುವುದಿಲ್ಲ,” ಎಂದು ಅವರನ್ನು ಗದರಿಸಿದೆ.”ಅನ್ಯರ ಮಕ್ಕಳಿಗೆ ಹೆಣ್ಣು ಕೊಡಬಾರದು; ನಮಗಾಗಲಿ ನಮ್ಮ ಮಕ್ಕಳಿಗಾಗಲಿ ಅವರಿಂದ ಹೆಣ್ಣು ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಗೊಳ್ಳುವುದಾಗಿ ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣ ಮಾಡಿಸಿದೆ.
ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.
ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,