Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಎಜ್ರನು ಎದ್ದು, ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ ಎಲ್ಲ ಇಸ್ರಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣ ಮಾಡಬೇಕೆಂದು ಹೇಳಿದನು. ಅವರು ಹಾಗೆಯೇ ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಈ ಪ್ರಕಾರ ನಡೆಯುವದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಎಜ್ರನು ಎದ್ದುನಿಂತು ಮಹಾಯಾಜಕರೂ, ಲೇವಿಯರೂ ಮತ್ತು ಇಸ್ರೇಲಿನ ಜನರೂ ಅವನು ಹೇಳಿದ ಪ್ರಕಾರ ಮಾಡುತ್ತೇವೆ ಎಂಬ ಪ್ರತಿಜ್ಞೆಯನ್ನು ಅವರಿಂದ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಎಜ್ರನು ಎದ್ದು, ಮಹಾಯಾಜಕರೂ ಲೇವಿಯರೂ ಸಮಸ್ತ ಇಸ್ರಾಯೇಲರೂ ಈ ಮಾತಿನ ಪ್ರಕಾರವಾಗಿ ಮಾಡಲು, ಅವರು ಆಣೆಯಿಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:5
10 ತಿಳಿವುಗಳ ಹೋಲಿಕೆ  

ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ಅವರು, “ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವುದಿಲ್ಲ. ನೀವು ಹೇಳಿದಂತೆಯೇ, ಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಯಿಸಿದೆ; ಯಾಜಕರ ಮುಂದೆ, ತಾವು ಕೊಟ್ಟ ಮಾತಿನಂತೆ ನಡೆಯುವುದಾಗಿ ಪ್ರಮಾಣ ಮಾಡಿಸಿದೆ.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು